alex Certify ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ- CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ- CM ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಹನುಮಂತಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಕಾಲ ಆಳಿದವರು.

ಕೆಂಗಲ್ ಹನುಮಂತಯ್ಯನವರ ಜನ್ಮ ದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯ ಮಂತ್ರಿಯಾದವರು. ವಿಧಾನಸೌಧದ ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರು ಉದ್ಘಾಟಿಸಲು ಬಿಡಲಿಲ್ಲ. ಅವರ ಆಡಳಿತ ನಮಗೆಲ್ಲಾ ಮಾದರಿ. ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ ಜನಾರ್ಧನ ಸೇವೆ ಎಂದು ಅದರ ಅರ್ಥ. ಬದ್ಧತೆ, ನಿಷ್ಠುರತೆಯಿಂದ ಸರ್ಕಾರದ ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು ನಮಗೆ ಮಾದರಿ ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...