
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಡೆದ ಹನಿಟ್ರ್ಯಾಪ್ ಗದ್ದಲ, ಬಿಜೆಪಿ ಶಾಸಕರ ಅಮಾನತು ಪ್ರಕರಣ ವಿಧಾನ ಪರಿಷತ್ ನಲ್ಲಿಯೂ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು.
ಬಿಜೆಪಿ ಸದಸ್ಯರು ವಿಧನಪರಿಷತ್ ನಲ್ಲಿಯೂ ಹನಿಟ್ರ್ಯಾಪ್ ಪ್ರಕರಣದ ವಿಚಾರ ಪ್ರಸ್ತಾಪಿಸಿ ಗದ್ದಲ ನಡೆಸಿದರು. ಇದೇ ವೇಳೆ ಸಭಾಪತಿ ಪೀಠದ ಮುಂದೆ ತೆರಳಿ ನಿರ್ಣಯಗಳ ಪೇಪರ್ ಹರಿದು ತೂರಾಡಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಕೆಲಕಾಲ ಕಲಾಪವನ್ನು ಮುಂದೂಡಿ ಆದೇಶ ಹೊರಡಿಸಿದರು.