ಬೆಂಗಳೂರು: ಹಳೆ ಪಿಂಚಣಿ ಮರು ಸ್ಥಾಪನೆಗೆ ಒತ್ತಾಯಿಸಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ಜಯಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 7ರಂದು ವಿಧಾನಸೌಧ ಛಲೋ ಹಮ್ಮಿಕೊಳ್ಳಲಾಗಿದೆ. ಕಳೆದ ಡಿಸೆಂಬರ್ ನಲ್ಲಿ ಎನ್.ಪಿ.ಎಸ್. ನೌಕರರು ನಡೆಸಿದ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.