alex Certify ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…!

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷವಾಗಿದೆ. ಕೆಲ ದಿನಗಳ ಹಿಂದೆ ವಿಧಾನಸೌಧದ ದಾಖಲೆಗಳಿರುವ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡು ಸಿಬ್ಬಂದಿಗಳನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೆ ವಿಧಾನಸೌಧದಲ್ಲಿ ಹಾವು ಪ್ರತ್ಯಕ್ಷವಾಗಿದೆ.

ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಹಾವು ಕಾಣಿಸಿಕೊಂಡಿದೆ. ಮೆಟ್ಟಿಲು ಮೇಲೆ ಕಾಣಿಸಿಕೊಂಡ ಹಾವು ಬಳಿಕ ಕಟ್ಟಡದ ಪಕ್ಕದ ಬಿಲವನ್ನು ಸೇರಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಾಗರಪಂಚಮಿ ಹಿಂದಿನ ದಿನವೇ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಾವು ಕಾಣಿಸಿಕೊಂಡಿರುವುದಕ್ಕೆ ಹಲವು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನು ನಿನ್ನೆ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಹಾವು ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...