alex Certify BREAKING : ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು : ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ.

ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಅದೇ ರೀತಿ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ, ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಗಿದೆ.

ಗ್ಯಾರಂಟಿಗಳ ಕುರಿತು ನಿನ್ನೆ ಸದನದಲ್ಲಿ ಬಿಜೆಪಿ ಸದಸ್ಯರು ಭಾರಿ ಗದ್ದಲ ಮಾಡಿ ಧರಣಿ ನಡೆಸಿದ್ದರು. ಇಂದು ಸದನದಲ್ಲಿ ಗ್ಯಾರಂಟಿಗಳ ಕುರಿತು ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ಆರಂಭವಾಗಿದ್ದು, ಇದರ ನಡುವೆ ಹೆಚ್ಡಿಕೆ ಕೂಡ ಪೆನ್ ಡ್ರೈವ್ ಸಮೇತ ಸದನಕ್ಕೆ ಆಗಮಿಸಿದ್ದು, ಹೆಚ್ಡಿಕೆ ನಡೆ ಬಹಳ ಕುತೂಹಲ ಮೂಡಿಸಿದೆ.

ಹಗರಣಗಳ ತನಿಖೆಗೆ ಮುಂದಾದ ರಾಜ್ಯ ಸರ್ಕಾರಕ್ಕೆ ‘ಮಾಜಿ ಸಿಎಂ ಬೊಮ್ಮಾಯಿ’ ಸವಾಲ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಇದ್ದುದೆ ಆದರೆ ಎಲ್ಲಾ ಪ್ರಕರಣಗಳನ್ನು ತನಿಖೆ ನಡೆಸಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕೀಯ ಪ್ರೇರಿತವಾಗಿ ಸರ್ಕಾರ ತನಿಖೆಗೆ ಮುಂದಾದರೆ ಹೇಗೆ? ತನಿಖೆ ನಡೆಸುವುದಾದರೆ 2013ರಿಂದ 2023ರವರೆಗಿನ ಎಲ್ಲಾ ಕೇಸ್ ಗಳನ್ನು ತನಿಖೆಗಾಗಿ ಆಯೋಗದ ಮುಂದೆ ಇಡಲಿ ಎಂದು ಆಗ್ರಹಿಸಿದ್ದಾರೆ.ಒಂದುವರೆ ವರ್ಷಗಳ ಕಾಲ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದರು. ಆರೋಪಕ್ಕೆ ಇದುವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆಗೆ ಮುಂದಾದರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಎಲ್ಲಾ ಕೇಸ್ ಗಳನ್ನು ತನಿಖೆ ಮಾಡಲಿ ಎಂದು ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...