ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಂದ್ರಾ ಲೇಔಟ್ ವಿದ್ಯಾಸಾಗರ ಪಬ್ಲಿಕ್ ಸ್ಕೂಲ್ ಶಾಲಾ ಶಿಕ್ಷಕಿ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಹಿಂದೂ ಸಂಘಟನೆಗಳು, ಶಿಕ್ಷಕಿಗೆ ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ ಎಂದು ಎಚ್ಚರಿಸಿವೆ.
ಶಿಕ್ಷಕಿ ಶಶಿಕಲಾ ಹಿಜಾಬ್ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮುಸ್ಲೀಂ ವಿದ್ಯಾರ್ಥಿಗಳ ಪೋಷಕರು ಇಂದು ವಿದ್ಯಾಸಾಗರ ಶಾಲೆಯ ಎದುರು ಪ್ರತಿಭಟನೆ ನಡೆಸಿದ್ದರು. ಶಿಕ್ಷಕಿಯನ್ನು ವಜಾ ಮಾಡುವಂತೆ ಒತ್ತಾಯಿಸಿದ್ದರು. ಶಾಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಶಾಲಾ ಶಿಕ್ಷಕಿ ಶಶಿಕಲಾ ಅವರನ್ನು ವಜಾಗೊಳಿಸಿ ಆಡಳಿತ ಮಂಡಳಿ ಕ್ರಮ ಕೈಗೊಂಡಿತ್ತು.
BIG NEWS: ಹಿಜಾಬ್ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟವಾಗಿದೆ; ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಡಿ.ವಿ.ಸದಾನಂದಗೌಡ
ಶಾಲಾ ಶಿಕ್ಷಕಿಯಿಂದ ಸೂಕ್ತ ವಿವರಣೆಯನ್ನೂ ಕೇಳದೆ ಏಕಾಏಕಿ ವಜಾಗೊಳಿಸಿದ ಶಾಲಾ ಆಡಳಿತ ಮಂಡಳಿ ಕ್ರಮ ಸರಿಯಲ್ಲ. ಅನಗತ್ಯವಾಗಿ ಶಿಕ್ಷಕಿ ಮೇಲೆ ಆರೋಪ ಮಾಡಲಾಗುತ್ತಿದೆ. ಶಿಕ್ಷಕಿ ವಜಾ ಆದೇಶ ವಾಪಸ್ ಪಡೆಯಬೇಕು. ಶಿಕ್ಷಕಿಗೆ ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.