ಬೆಂಗಳೂರು: ವಿದ್ಯಾಗಮ ಯೋಜನೆ ಮತ್ತೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲಿದೆ.
ಕೊರೋನಾಕಾರಣದಿಂದ ಶಾಲೆಗಳು ನಡೆಯದ ಹಿನ್ನೆಲೆಯಲ್ಲಿ ಮಕ್ಕಳಿಗೆ ಮನೆ ಸಮೀಪದಲ್ಲೇ ವಿದ್ಯಾಗಮ ಯೋಜನೆಯ ಮೂಲಕ ಶಿಕ್ಷಣ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ಮನೆಬಾಗಿಲಲ್ಲೇ ಮಕ್ಕಳ ಕಲಿಕೆಗೆ ವ್ಯವಸ್ಥೆ ಮಾಡಲಾಗಿದ್ದು ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾಗಳ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪರಿಷ್ಕೃತ ರೂಪದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ.
ಅ. 10 ರಂದು ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಪರಿಷ್ಕೃತ ರೂಪದಲ್ಲಿ ಸುರಕ್ಷತಾ ಕ್ರಮಗಳು, ಕೋವಿಡ್ ಮಾರ್ಗಸೂಚಿಯಂತೆ ವಿದ್ಯಾಗಮ ಯೋಜನೆ ಆರಂಭಿಸಲಾಗುವುದು. ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಕಾರ್ಯಕ್ರಮದ ಉಸ್ತುವಾರಿ ನೀಡಲಾಗುವುದು.
ವಿದ್ಯಾಗಮ ಸ್ಥಗಿತಗೊಂಡ ಕಾರಣ ಮಕ್ಕಳಿಗೆ ತೊಂದರೆಯಾಗಿತ್ತು. ಮಕ್ಕಳು ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗೆ ಮಕ್ಕಳು ಒಳಗಾಗುತ್ತಿದ್ದಾರೆ. ತಜ್ಞರಿಂದ ಮಕ್ಕಳ ಹಕ್ಕು ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಇವೇ ಮೊದಲಾದ ಕಾರಣದಿಂದ ಸುರಕ್ಷತಾ ಕ್ರಮಗಳೊಂದಿಗೆ ಪರಿಷ್ಕೃತಗೊಂಡ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು ಎನ್ನಲಾಗಿದೆ.