alex Certify BIG NEWS : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮೊತ್ತ 1,500 ರೂ.ಗೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮೊತ್ತ 1,500 ರೂ.ಗೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತ 1,500 ರೂ.ಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನ 1,500 ರೂ.ಗಳಿಂದ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು. ಪ್ರೌಢಶಾಲೆಗೆ ಬರುವವರೆಗೂ ನಾನು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ. ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು.

ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ. ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಬೇಕು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಬೇಕು. ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು, ಅದಕ್ಕಾಗಿ ಶ್ರಮವಹಿಸಬೇಕು. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ. ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು. ಸಮಾಜದಲ್ಲಿ ತುಳಿತಕ್ಕೊಳಗಾದವರ, ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ – ಸಾವು ನಿಶ್ಚಿತ, ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...