alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ  ಪ್ರವಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.    ಅರ್ಜಿ ಸಲ್ಲಿಸಲು ಮಾರ್ಚ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: www.ssp.postmatric.karnataka.gov.in   ನಲ್ಲಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ www.bcw.karnataka.gov.in ನೋಡಬಹುದು. ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ:8050770005/ 8050770004 ಇ-ಮೇಲ್:  bcwd.scholarship@karnataka.gov.in ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 080-35254757 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...