
ವಿಜಯವಾಡ: ಅಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿಜಯವಾಡದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯವಾಡದ ಮೊಘಲ್ ರಾಜಪುರಂ ಕಾಲೋನಿಯ ಸುನ್ನಪುಬಟ್ಟಿ ಎಂಬಲ್ಲಿ ಭೂಕುಸಿತ ಸಂಭವಿಸಿದ್ದು, ಗುಡ್ಡದ ಮೇಲಿಂದ ಭಾರಿ ಗಾತ್ರದ ಕಲ್ಲುಬಂಡೆಗಳು, ಮಣ್ಣು ಮನೆಗಳ ಮೇಲೆ ಬಿದ್ದಿವೆ. ಒಂದು ಮನೆ ಸಂಪೂರ್ಣ ನೆಲಸಮವಾಗಿದೆ. ಮನೆಯಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪಿದ್ದಾರೆ.
ದುರಂತದಲ್ಲಿ ಮೂರು ಮನೆಗಳಿಗೆ ಹಾನಿಯಾಗಿದೆ. ಮೃತರನ್ನು ಮೇಘನಾ (25) ಬೊಲೆಂ ಲಕ್ಷ್ಮೀ (49) ಲಾಲು (20), ಅನ್ನಪೂರ್ಣ (55) ಸೇರಿ ಐವರು ಸಾವನ್ನಪ್ಪಿದ್ದಾರೆ.
ಭೂಕುಸಿತ ದುರಂತಕ್ಕೆ ಸಿಎಂ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.