alex Certify ರಿಷಬ್ ಶೆಟ್ಟಿ – ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಬಿಗ್ ಬಜೆಟ್ ಸಿನಿಮಾ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಷಬ್ ಶೆಟ್ಟಿ – ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಬಿಗ್ ಬಜೆಟ್ ಸಿನಿಮಾ..!

ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಇಬ್ಬರು ದೊಡ್ಡ ಬಜೆಟ್ ನ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಹೌದು, ಕಾಂತಾರ ಸಿನಿಮಾ ಮಾಡಿ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದ ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿಯವರ ಮುಂದಿನ ಸಿನಿಮಾಕ್ಕಾಗಿ ಸಿನಿರಸಿಕರು ಎದುರು ನೋಡುತ್ತಿದ್ದಾರೆ. ಇದರ ನಡುವೆ ತೆಲುಗು ನಟ ವಿಜಯ್ ದೇವರಕೊಂಡ ಜೊತೆ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಇತ್ತೀಚೆಗೆ ಲೈಗರ್ ಸಿನಿಮಾ ಮಾಡಿ ಸೋಲಿನ ರುಚಿ ನೋಡಿದ ವಿಜಯ್ ದೇವರಕೊಂಡ ಶೆಟ್ಟರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸಿನಿಮಾ ಅನೌನ್ಸ್ ಆಗುವರೆಗೂ ಕಾದು ನೋಡಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...