ನವದೆಹಲಿ: ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಫ್ರಾನ್ಸ್ ನಲ್ಲಿದ್ದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಭಾರತದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಲಂಡನ್ ನಲ್ಲಿ ನೆಲೆಸಿರುವ ವಿಜಯ್ ಮಲ್ಯಗೆ ಸೇರಿದ ಫ್ರಾನ್ಸ್ ನಲ್ಲಿರುವ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಫ್ರಾನ್ಸ್ ನಲ್ಲಿ 1.6 ಮಿಲಿಯನ್ ಯೂರೋ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಇಡಿಯ ಕೋರಿಕೆಯ ಮೇರೆಗೆ ಫ್ರಾನ್ಸ್‌ನ 32 ಅವೆನ್ಯೂ ಫೋಚ್‌ನಲ್ಲಿರುವ ವಿಜಯ್ ಮಲ್ಯ ಅವರ ಆಸ್ತಿಯನ್ನು ಫ್ರೆಂಚ್ ಪ್ರಾಧಿಕಾರ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಆಸ್ತಿಯ ಮೌಲ್ಯ ಅಂದಾಜು 14 ಕೋಟಿ ರೂ. ಎಂದು ಹೇಳಲಾಗಿದೆ.
ಕಿಂಗ್‌ಫಿಶರ್ ಏರ್‌ಲೈನ್ಸ್ ಲಿಮಿಟೆಡ್(ಕೆಎಎಲ್) ನ ಬ್ಯಾಂಕ್ ಖಾತೆಯಿಂದ ಹೆಚ್ಚಿನ ಮೊತ್ತವನ್ನು ವಿದೇಶಕ್ಕೆ ರವಾನಿಸಲಾಗಿದೆ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.