ಬೆಂಗಳೂರು : ಕನ್ನಡ ಚಿತ್ರರಂಗದ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ ನಿಮಗೆ ಗೊತ್ತಿದೆ. ಅಷ್ಟು ಆರೋಗ್ಯವಾಗಿದ್ದ ಸ್ಪಂದನಾ ಸಾವಿಗೆ ಕಾರಣವೇನು..? ಏಕಾಏಕಿ 16 ಕೆಜಿ ತೂಕ ಇಳಿಸಿಕೊಂಡಿದ್ದ ಸ್ಪಂದನಾ ಸಾವಿಗೆ ಮುಳುವಾಯ್ತಾ..? ಸದ್ಯ ಈ ವಿಚಾರ ಎಲ್ಲರಲ್ಲಿ ಚರ್ಚೆಯಾಗುತ್ತಿದೆ.
ಧಿಡೀರ್ ಆಗಿ 16 ಕೆಜಿ ತೂಕ ಇಳಿಸಿಕೊಂಡಿದ್ದ ಸ್ಪಂದನಾ ಸಾವಿಗೆ ಅತಿಯಾದ ಡಯಟ್ ಮುಳುವಾಯ್ತಾ..? ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡುತ್ತಿದೆ. ಲಾಕ್ ಡೌನ್ ಟೈಮಲ್ಲಿ ದಪ್ಪ ಆಗಿದ್ದ ಸ್ಪಂದನಾ ಧಿಡೀರ್ ಆಗಿ 16 ಕೆಜಿ ತೂಕ ಕಡಿಮೆ ಇಳಿಸಿಕೊಂಡಿದ್ದರಂತೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೃದ್ರೋಗ ತಜ್ಞ ಡಾ. ಮಂಜುನಾಥ್ ‘ ಅತಿಯಾದ ತೂಕ ಇಳಿಸಿಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದಲ್ಲ, ಸಣ್ಣ ವಯಸ್ಸಿನ ಮಹಿಳೆಯರು ಕೂಡ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಇದಕ್ಕೆ ಕಾರಣ ಅತಿಯಾದ ಒತ್ತಡ. ಎಂದಿದ್ದಾರೆ.
ನಾಳೆ ಸ್ಪಂದನಾ ಅಂತ್ಯಕ್ರಿಯೆ
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಥೈಲ್ಯಾಂಡ್ ನಲ್ಲಿ ಮರಣೋತ್ತರ ಪರೀಕ್ಷೆ ಸಂಪೂರ್ಣ ಮುಗಿದಿದೆ.ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ತರಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಾಳೆ ಸಂಜೆ ಶ್ರೀರಾಂಪುರದಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕೋವಿಡ್ ಬಳಿಕ ಹೃದಯಾಘಾತ ಹೆಚ್ಚಳ : ಹೃದ್ರೋಗ ತಜ್ಞ ಡಾ. ಮಂಜುನಾಥ್
ಕೋವಿಡ್ ಸೋಂಕು ಕಾಣಿಸಿಕೊಂಡನಂತರ ಹೃದಯಾಘಾತ ಆಗುವ ಸಂಖ್ಯೆ.ಶೇ.3 ರಿಂದ 4 ರಷ್ಟು ಹೆಚ್ಚಾಗಿದೆ. ಈ ಬಗ್ಗೆ ಆತಂಕ ಬೇಡ. ಆದರೆ ಎಚ್ಚರವಹಿಸುವುದು ಅಗತ್ಯ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
35 ವರ್ಷದ ನಂತರದ ಪುರುಷರು ಮತ್ತು ಮಹಿಳೆಯರು ವರ್ಷಕ್ಕೆ ಒಮ್ಮೆ ಇಸಿಜಿ, ರಕ್ತದೊತ್ತಡ ಸೇರಿದಂತೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಹೃದಯಾಘಾತಕ್ಕೆ ಜೀವನ ಶೈಲಿ, ಒತ್ತಡ ಕೂಡ ಕಾರಣವಾಗುತ್ತದೆ , ಎಲ್ಲರೂ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ, ಆಗಾಗ ಆಸ್ಪತ್ರೆಗಳಲ್ಲಿ ಚೆಕಪ್ ಮಾಡಿಸಿಕೊಳ್ಳಿ ಎಂದರು. ಯುವಕರಲ್ಲಿ ಹಾಗೂ ಮಧ್ಯ ವಯಸ್ಕರಲ್ಲಿ ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ಹೆಚ್ಚಾಗಿದೆ. ಅತಿಯಾದ ಜಂಕ್ ಫುಡ್ ಹಾಗೂ ಧೂಮಪಾನ, ಮಧ್ಯಪಾನ, ಒತ್ತಡ ಹಾಗೂ ಅಧಿಕ ರಕ್ತದೊತ್ತಡದಿಂದ ಹೃದಯಾಘಾತ ಸಂಭವಿಸುತ್ತಿವೆ ಎಂದರು.