ಹುಬ್ಬಳ್ಳಿ: ಉಚಿತವಾಗಿ ಪಡಿತರ ನೀಡುವುದರಿಂದ ಕಾರ್ಮಿಕರು ಕೆಲಸಕ್ಕೆ ಬಾರದೆ ಉತ್ಪಾದನೆ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಉದ್ಯಮಿ ವಿಜಯ ಸಂಕೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಅವರು, ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಮೂರು ತಿಂಗಳು ಉಚಿತವಾಗಿ ಪಡಿತರ ನೀಡಲಾಗಿತ್ತು. ಈಗ 80 ಕೋಟಿ ಜನರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದ ಉದ್ಯೋಗವಿದ್ದರೂ ಕೂಡ ಕಾರ್ಮಿಕರು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ನೆರವು ಬೇಕು. ಆದರೆ, ಈಗ ಕಾರ್ಮಿಕರಿಗೆ ಸಾಕಷ್ಟು ಕೆಲಸವಿದೆ. ಇಂತಹ ಸಂದರ್ಭದಲ್ಲಿ ಪುಕ್ಕಟ್ಟೆಯಾಗಿ ಸೌಲಭ್ಯ ನೀಡುವುದು ಸರಿಯಲ್ಲ. ಇದರಿಂದ ಉತ್ಪಾದನೆಯ ಮೇಲೆ ಪರಿಣಾಮವುಂಟಾಗುತ್ತದೆ. ಉತ್ಪಾದನೆ ಕುಸಿತವಾಗಿ ಸರಕುಸಾಗಣೆ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.