
ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ.
ವೀರೇಶ್ (12) ಹಾಗೂ ವಿನಯ್ (12) ಮೃತ ಬಾಲಕರು. ಕೆರೆಗೆ ಈಜಲೆಂದು ಹೋದವರು ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕರ ಶವಗಳನ್ನು ಹೊರತೆಗೆದಿದೆ.
ಹಗರಿಬೊಮ್ಮನಹಳ್ಳಿ ಪೊಲೀಸ್ ಥಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.