alex Certify ಕಾಶಪ್ಪನವರ್ ಅಂದ್ರೆ ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲಾ ಅವರಾ..? ವಿಜಯೇಂದ್ರ ತಿರುಗೇಟು- ಮೀಸಲಾತಿಗೆ ಮಾತಿನ ಸಮರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಶಪ್ಪನವರ್ ಅಂದ್ರೆ ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲಾ ಅವರಾ..? ವಿಜಯೇಂದ್ರ ತಿರುಗೇಟು- ಮೀಸಲಾತಿಗೆ ಮಾತಿನ ಸಮರ

ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ? ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲ ಅವರಾ? ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯಿತ ನಾಯಕರ ನಡುವೆ ಮಾತಿನ ಸಮರವೇ ನಡೆದಿದೆ. ವಿಜಯೇಂದ್ರ ವಿರುದ್ಧ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದ್ದು, ಶ್ರೀಗಳ ಮೂಲಕ ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಮಾಡುತ್ತಿದ್ದಾರೆ. ಕೆಲವು ಮಠಾಧೀಶರನ್ನು ಸೇರಿಸಿ ಸಭೆ ನಡೆಸುತ್ತಿದ್ದಾರೆ. ಹೀಗೆ ಸಭೆ ಮಾಡುವ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಾನಂದ ಕಾಶಪ್ಪನವರ್ ಅವರು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಾನಂದ ಕಾಶಪ್ಪನವರ್ ಅವರ ಆರೋಪಕ್ಕೆ ಏಕವಚನದಲ್ಲೇ ತಿರುಗೇಟು ನೀಡಿದ ವಿಜಯೇಂದ್ರ, ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಉಪಾಧ್ಯಕ್ಷನಾಗಿ ನಾನು ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವ ಹೋರಾಟವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಿಸಿದ ವಿಚಾರವೂ ಅಲ್ಲ ಎಂದು ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಎಲ್ಲಾ ಮಠಮಾನ್ಯಗಳಿಗೆ ಗೌರವ ಕೊಡುತ್ತಾರೆ. ಕಾಶಪ್ಪನವರ್ ಇಲ್ಲಸಲ್ಲದ ಆರೋಪಗಳನ್ನು ಮಾಡಬಾರದು ಎಂದು ವಿಜಯೇಂದ್ರ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...