alex Certify ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿದ್ದ ತಂದೆ, ಮಗಳು ಸಾವು; ತಾಯಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿದ್ದ ತಂದೆ, ಮಗಳು ಸಾವು; ತಾಯಿ ಗಂಭೀರ

ವಿಜಯಪುರ: ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ರಮೇಶ ನಾಟಿಕಾರ(35) ಮತ್ತು ಅವರ ಪುತ್ರಿ ಖುಷಿ(8) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ತಾಯಿ ಶ್ರೀದೇವಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಸವನಬಾಗೇವಾಡಿ ತಾಲ್ಲೂಕಿನ ಬೂದಿಹಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತದ ನಂತರ ಕ್ರೂಸರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...