ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ ವಿಜಯಪುರ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ರಾತ್ರಿಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿದ್ದಾರೆ.
ಜಿಲ್ಲೆಯಲ್ಲಿ ನಾಳೆ ನಡೆಯಬೇಕಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ನಾಳೆ ಬಂದ್ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ.