
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಾತ್ರಿ 11.42 ಮತ್ತು ಇಂದು ಬೆಳಗ್ಗೆ 6 19ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.
ವಿಜಯಪುರ ನಗರದ ರೈಲ್ವೆ ಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ.