ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ವಿಜಯಪುರ ನಗರದ ಹಲವೆಡೆ ಸಂಜೆ 4 ಗಂಟೆ 26 ನಿಮಿಷಕ್ಕೆ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.6 ರಷ್ಟು ದಾಖಲಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಪದೇಪದೇ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ನಿರಂತರ ಭೂಕಂಪನದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.