ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.
ವಿಜಯಪುರ ನಗರ ಮಾತ್ರವಲ್ಲದೇ, ತಿಕೋಟ, ಬಬಲೇಶ್ವರ, ಬಸವನ ಬಾಗೇವಾಡಿ ತಾಲೂಕುಗಳು ಸೇರಿದಂತೆ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದೆ. ಜಿಲ್ಲೆಯ ಇತರೆ ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ.
ರಾತ್ರಿ 8 ಗಂಟೆ 16 ನಿಮಿಷಕ್ಕೆ ಭೂಮಿ ಕಂಪಿಸಿದೆ. ಭೂಕಂಪನವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.