ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದೆ.
ಬೆಳಗ್ಗೆ 6 21ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ, ವಿಜಯಪುರ ತಾಲೂಕಿನ ನಾಗಠಾಣ, ಅಲಿಯಾಬಾದ ಹಾಗೂ ತಿಕೋಟಾ ತಾಲೂಕಿನ ಘೋಷಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ ಸೇರಿದಂತೆ ಹಲವಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 4.9 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.