ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲೇ ಆಶಾ ಕಾರ್ಯಕರ್ಯೆ ಪ್ರಿಯಕರನೊಂದಿಗೆ ಲವ್ವಿಡವ್ವಿ ನಡೆಸಿದ ಘಟನೆ ನಡೆದಿದೆ.
ಇಂಡಿ ತಾಲ್ಲೂಕಿನ ಗ್ರಾಮವೊಂದರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಆಕೆಯ ಪ್ರಿಯಕರ ಸರಸ ಸಲ್ಲಾಪದಲ್ಲಿ ತೊಡಗಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಆಸ್ಪತ್ರೆಯ ಬೆಡ್ ಮೇಲೆ ಇಬ್ಬರು ಚುಂಬಿಸಿ ಮುದ್ದಾಡಿಕೊಂಡ ವಿಡಿಯೋ ವೈರಲ್ ಆಗಿದೆ. ವಿಡಿಯೋ ಗಮನಿಸಿದ ಗ್ರಾಮಸ್ಥರು ತನಿಖೆಗೆ ಒತ್ತಾಯಿಸಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.