
ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿಯುವ ನೀರಿಗೆ ಚರಂಡಿ ನೀರು ಸೇರ್ಪಡೆಯಾಗಿರುವುದು ಸಮಸ್ಯೆಗೆ ಕಾರಣವೆನ್ನಲಾಗಿದೆ. 15 ವರ್ಷದ ಗುರುರಾಜ್ ಹಾಗೂ ನೀಲಮ್ಮ(65) ಮೃತಪಟ್ಟವರು ಎಂದು ಹೇಳಲಾಗಿದೆ.
ಕಲುಷಿತ ನೀರು ಸೇವಿಸಿದ ನಾಲ್ವರು ಅಸ್ವಸ್ಥರಾಗಿದ್ದು, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಲ್ಲಿ ನೀರು ಕಲುಷಿತಗೊಂಡ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿ ಮಾತ್ರೆ ನೀಡಿದ್ದಾರೆ.