alex Certify BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಎರಡು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀದಾ ಬೇಗಂ (36), ರೋಹಿಣಿ ಪಂಚಾಳ (31) ಮೃತ ದುರ್ದೈವಿಗಳು.

ಗಾಯಾಳು ಪ್ರಯಾಣಿಕರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿದ್ದು, ಎರಡೂ ಸರ್ಕಾರಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...