
ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) ಮೃತ ಮಗು. ಭಾರಿ ಮಳೆ ಕಾರಣಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಪಾಲಿಕೆಯವರು ಚರಂಡಿ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಮಗು ಚರಂಡಿ ಬಳಿ ಹೋಗಿ ಆಕಸ್ಮಿಕವಾಗಿ ಚಂಡಿಗೆ ಬಿದ್ದು ಸಾವನ್ನಪ್ಪಿದೆ.
ದುರಂತಕ್ಕೆ ಪಾಲಿಕೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.