
ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, 15 ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಗಾಂಧಿಚೌಕ್ ಪೊಲೀಸ್ ಠಾಣೆಯ ಹಿಂಭಾಗ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ವಾಹನಗಳನ್ನು ತಂದು ನಿಲ್ಲಿಸಲಾಗಿತ್ತು. ರಣಬಿಸಿಲ ನಡುವೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆಗೆ ವಾಹನಗಳ ಟೈರ್ ಗಳು ಸ್ಫೋಟಗೊಂಡಿವೆ. ಘಟನೆಯಲ್ಲಿ 15 ವಾಹನಗಳು ಸುಟ್ಟು ಕರಕಲಾಗಿವೆ.
ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲ ಪ್ರದೇಶಕ್ಕೂ ವ್ಯಾಪಿಸಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದೆ.