
ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಅವತಾಡೆ ಅಮಾನತುಗೊಂಡವರು.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದಲ್ಲಿ ಡಿಡಿಪಿಐ ಟಿ.ಎಸ್.ಕೋಲಾರ್, ವಿಜಯ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.