
ವಿಜಯಪುರ: ಸಂಸದ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದಲ್ಲಿ ದೂರು ದಾಖಲಾಗಿದೆ.
ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಆರೋಪದಲ್ಲಿ ಯತ್ನಾಳ್ ವಿರುದ್ಧ ವಿಜಯಪುರದ ಗಾಂಧಿಚೌಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವವರು ಯತ್ನಾಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಅ.15ರಂದು ವಿಜಯಪುರದ ಸಿದ್ದೇಶ್ವರ ಗುಡಿ ಬಳಿ ವಕ್ಫ್ ಹಠಾವೋ, ದೇಶ ಬಚಾವೋ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಯತ್ನಾಳ್, ಕಾಂಗ್ರೆಸ್ ನಾಯಕರನ್ನು ಅವಾಚ್ಯವಾಗಿ ನಿಂದಿಸಿದ್ದರು.