alex Certify BREAKING: ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ‘ವಚನ’ ಕೃತಿ ನೀಡಿ ಹೊಸ ವರ್ಷದ ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಮಿತ್ ಶಾ ಭೇಟಿಯಾದ ವಿಜಯೇಂದ್ರ: ‘ವಚನ’ ಕೃತಿ ನೀಡಿ ಹೊಸ ವರ್ಷದ ಶುಭಾಶಯ

ನವದೆಹಲಿ: ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿ ವಿಜಯೇಂದ್ರ ವಚನಗಳ ಹಿಂದಿ ಅನುವಾದಿತ ಕೃತಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾಸ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ಭೇಟಿಯ ಬಳಿಕ ವಿಜಯೇಂದ್ರ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ಅವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...