ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ಮೋದಿಯವರಿಗೆ ನೇರವಾಗಿ ಪತ್ರ ಬರೆದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅನ್ವರ್ ಮಾಣಿಪ್ಪಾಡಿ ಅವರು, ವಿಜಯೇಂದ್ರ ನನಗೆ ಯಾವುದೇ ಆಮಿಷವೊಡ್ಡಿರಲಿಲ್ಲ. ಅಂದು ವಿಜಯೇಂದ್ರ ಯಾರು ಎಂಬುದೇ ನನಗೆ ಗೊತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅನ್ವರ್ ಮಾಡಿ ತಿಳಿಸಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಕಾಂಗ್ರೆಸ್ ನವರು ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿದ್ದರು. ಆಗ ವಿಜಯೇಂದ್ರ ಯಾರು ಎಂಬುದು ನನಗೆ ಗೊತ್ತಿರಲಿಲ್ಲ. ಅವರು ನಮ್ಮ ಮನೆಗೆ ಬಂದಿರಲಿಲ್ಲ ಎಂದು ಅ ಹೇಳಿದ್ದಾರೆ.