alex Certify BIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಕೆಲ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಯತ್ನಾಳ್ ಸೇರಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರವಾಗಿ ಇಂತಹ ಸಭೆ ನಮಗೆ ಹೊಸದೇನಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವಧಿಯಲ್ಲಿ ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಇಂತಹ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...