ಹಾಸನ: ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಬಂಧನಕ್ಕಿಡಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ, ನನ್ನ ಬಂಧನದ ಹಿಂದೆ ವ್ಯವಸ್ಥಿತ ಪಿತೂರಿಯೇ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, ಇದರ ಹಿಂದೆ ದೊಡ್ಡ ಪಿತೂರಿಯೇ ಇದೆ. ಯಾರು ಪಿತೂರಿ ಮಾಡ್ತಿದ್ದಾರೆ ಎಂಬುದನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ.
ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ. ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ತಕ್ಕ ಉತ್ತರ ನೀಡುತ್ತೇನೆ ಎಂದು ಗುಡುಗಿದ್ದಾರೆ.