ಬೆಂಗಳೂರು: ಜಮೀನಿನ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಬಂಧಿತ ಆರೋಪಿ. ಹೆಚ್.ಎಂ. ಪ್ರಕಾಶ್ ಎಂಬುವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕಾಶ್ ಅವರ ಮೃತ ಸಹೋದರನ ಪುತ್ರಿಯ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಎರಡು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಸ್ವೀಕರಿಸಿದ್ದರು. ಮತ್ತೆ 70,000 ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.