ಬೆಂಗಳೂರು: ತಮ್ಮ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಅನುಮತಿ ಕೋರಿ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ ಅನುಮತಿ ನೀಡಿದೆ.
ತುಮಕೂರು 13, ಚಿಕ್ಕಬಳ್ಳಾಪುರ 10, ಚಿತ್ರದುರ್ಗ 11, ಕೊಡಗು 13, ಕೋಲಾರ 11, ಉತ್ತರ ಕನ್ನಡ 26 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಆಯಾ ಜಿಲ್ಲೆಗಳಿಗೆ ಮಂಜೂರಾಗಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಪೈಕಿ ಶೇಕಡ 85 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಅನುಮತಿ ನೀಡಿದೆ.