ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ 04-03-2024 ರಿಂದ ಅರ್ಜಿ ಸಲ್ಲಿಸಬಹುದೆಂದು ದಿನಾಂಕ 21-02-2024 ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.
ಶುಲ್ಕ ಪಾವತಿಯ ಇಂಟಫೇಸ್ ಅನ್ನು ಸಿದ್ದ ಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದ್ದರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ. ಇತ್ತೀಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಲು ಸೂಚಿಸಿದೆ.