ದಾವಣಗೆರೆ : 6000 ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನ್ಯಾಮತಿ ಗ್ರಾಮ ಆಡಳಿತಾಧಿಕಾರಿ ಕೆ.ಜಿ ಗಣೇಶ್ ಎಂಬುವವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯುವತಿಯೊಬ್ಬರಿಗೆ ವಿಕಲಚೇತನ ಪ್ರಮಾಣ ಪತ್ರ ನೀಡಲು 6000 ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗಣೇಶ್ ರನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.