ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಸವಣೂರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಿಗುವ ಸರ್ಕಾರಿ ಸೇವೆಗಳನ್ನು ಗ್ರಾಮಗಳ ಮಟ್ಟದಲ್ಲಿ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಡಿಜಿಟಲೀಕರಣಕ್ಕೆ ಒತ್ತು ನೀಡಲಾಗುವುದು. ಇದರೊಂದಿಗೆ ಎಲ್ಲಾ ಗ್ರಾಮಗಳಿಗೆ ಇಂಟರ್ ನೆಟ್ ಸೇವೆ ಕಲ್ಪಿಸಲಾಗುವುದು. ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡುವ ಜೊತೆಗೆ ಉದ್ಯೋಗ ಆಧಾರಿತ ನೀತಿ ಜಾರಿಗೊಳಿಸಲಾಗುವುದು. ಇಂಡಸ್ಟ್ರಿಯಲ್ ಟೌನ್ಶಿಪ್ ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.