alex Certify ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಕಂಪನ: ಒಂದೇ ದಿನ ಎರಡು ಬಾರಿ ಕಂಪನದಿಂದ ಜನರಲ್ಲಿ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಕಂಪನ: ಒಂದೇ ದಿನ ಎರಡು ಬಾರಿ ಕಂಪನದಿಂದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಕಂಪನವಾಗಿದೆ.

ಗ್ರಾಮದಲ್ಲಿ ಇಂದು ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿದೆ. ಬೆಳಿಗ್ಗೆ ಮತ್ತು ಸಂಜೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಬೆಳಗ್ಗೆ 7.40 ರ ಸುಮಾರಿಗೆ ಕೊಡಗು ಜಿಲ್ಲೆ ಗಡಿಭಾಗ -ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿತ್ತು. ಕಲ್ಲುಗುಂಡಿ, ಸಂಪಾಜೆ ಬಳಿ ಲಘು ಕಂಪನವಾಗಿ ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ಶನಿವಾರ ಕೂಡ ಭೂಮಿ ಕಂಪಿಸಿದ್ದು, ಕೆಲವು ಮನೆಗಳಲ್ಲಿ ಬಿರುಕು ಮೂಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...