ಬೆಂಗಳೂರು: ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ‘ಪ್ರಗತಿಪಥ’ ಎಂಬ ಹೊಸ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಭಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪ್ರಗತಿಪಥ ಯೋಜನೆ ಅಡಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30 ಕಿಲೋಮೀಟರ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣ ಭಾಗದಲ್ಲಿ 62,157 ಕಿ.ಮೀ ಡಾಂಬರೀಕರಣ ರಸ್ತೆ, 22,060 ಕಿಲೋಮೀಟರ್ ಜಲ್ಲಿ ರಸ್ತೆ, 1.14 ಲಕ್ಷ ಕಿ.ಮೀ. ಮಣ್ಣಿನ ರಸ್ತೆ ಇದೆ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಾಜಪೇಯಿ ಅವರ ಕಾಲದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರೀತಿಯಲ್ಲೇ ರಾಜ್ಯ ಸರ್ಕಾರದಿಂದ ಪ್ರಗತಿಪಥ ಎಂಬ ದೊಡ್ಡ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಪ್ರತಿ ವರ್ಷ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 25 ರಿಂದ 30 ಕಿಲೋಮೀಟರ್ ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ರಸ್ತೆ ನಿರ್ಮಾಣದ ಗುತ್ತಿಗೆ ಪಡೆದವರೇ ಮುಂದಿನ ಐದು ವರ್ಷ ಆ ರಸ್ತೆಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.