alex Certify ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ವೈದ್ಯರ ನಡೆ ಹಳ್ಳಿಗಳ ಕಡೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಪ್ರತಿ ಹಳ್ಳಿಗೆ ತೆರಳಿ ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತದೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ ನಂತರ ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೋವಿಡ್ ಪ್ರಸರಣದ ಸರಪಳಿ ತುಂಡರಿಸಲು ಕ್ರಮಕೈಗೊಳ್ಳಲಾಗಿದೆ. ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೆಚ್ಚಿನವರು ಪರೀಕ್ಷೆಗೆ ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ತಂಡ ಪ್ರತಿ ಮನೆಗೆ ತೆರಳಿ ಸೋಂಕಿನ ಲಕ್ಷಣ ಇರುವವರನ್ನು ಗುರುತಿಸಿದ ಪರೀಕ್ಷೆ ಮಾಡಲಾಗುವುದು.

ಪಾಸಿಟಿವ್ ಕಂಡು ಬಂದರೆ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಇಲ್ಲದಿದ್ದರೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಿಗೂ ಪರೀಕ್ಷೆ ಮಾಡಲಾಗುವುದು. ಹೋಂ ಐಸೋಲೇಷನ್ ಗೆ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಸೋಂಕಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಅಂಬುಲೆನ್ಸ್ ಸಜ್ಜಾಗಿದ್ದು, ಸಂಚಾರಿ ಕ್ಲಿನಿಕ್ ಗಳ ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...