ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಥಳಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಹುಲಿ ದಾಳಿಗೆ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೀಗಾಗಿ ಸಿಟ್ಟೆಗೆದ್ದ ಗ್ರಾಮಸ್ಥರು ಸ್ಥಳಕ್ಕೆ ಬಂದ ಅರಣ್ಣ ಇಲಾಖೆಯ ಸಿಬ್ಬಂದಿಯನ್ನೇ ಹಿಡಿದು ಥಳಿಸಿದ್ದಾರೆ.
ಕೆಲ ದಿನಗಳಿಂದ ಹುಲಿ ಪದೇ ಪದೇ ದಾಳಿ ಮಾಡುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ.