ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ ಕುಲಕರ್ಣಿ ಅವರನ್ನು ಮೂರು ದಿನ ಸಿಬಿಐ ವಶಕ್ಕೆ ಧಾರವಾಡ ಕೋರ್ಟ್ ನೀಡಿದ್ದು, ಇಂದು ಬೆಳಿಗ್ಗೆ ಜೈಲಿಗೆ ಆಗಮಿಸಿದ ಅಧಿಕಾರಿಗಳು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಶುಭಾಶಯ ಕೋರಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಜೈಲಿನಿಂದ ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.