ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.
ಫೆಬ್ರವರಿ 19 ರ ವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಮೂರು ತಿಂಗಳಿನಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿನಯ ಕುಲಕರ್ಣಿ ಅವರು ಇದ್ದಾರೆ. ಅವರ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ.