ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ, ದೂರು ನೀಡಿರುವ ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಮಹಿಳೆ ವಿರುದ್ಧ ಸುಳ್ಳು ಆರೋಪ, ತೆಜೋವಧೆ, ಬೆದರಿಕೆ ಹಾಕಿದ ಆರೋಪದಡಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.
ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ನನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಖಾಸಗಿ ಸುದ್ದಿವಾಹಿನಿಯೊಂದು ಯತ್ನಿಸಿದೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿ ವಾಹಿನಿ ಹಾಗೂ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಿಳೆ ಅನೇಕ ಅಧಿಕಾರಿಗಳು, ರಾಜಕೀಯ ನಾಯಕರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ಈ ಮೂಲಕ ನನ್ನ ವಿರುದ್ಧವೂ ಸಂಚು ರೂಪಿಸಿ ಮಾನಹಾನಿ ಮಾಡಲಗಿದೆ ಎಂದು ವಿನಯ್ ಕುಲಕರ್ಣಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.