ಬೆಳಗಾವಿ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಮಾವನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.
ಅವರ ಮಾವ ಗಂಗಪ್ಪ ಸಿಂತ್ರೆ ಹೃದಯಾಘಾತದಿಂದ ನಿಧನರಾಗಿದ್ದು, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿಬಿಐ ವಿಶೇಷ ಕೋರ್ಟ್ ಗೆ ಕುಟುಂಬದವರು ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿದೆ.
ಬಿಗಿಭದ್ರತೆಯಲ್ಲಿ ಹಿಂಡಲಗಾ ಜೈಲಿನಿಂದ ಸವದತ್ತಿಗೆ ತೆರಳಿದ ವಿನಯ ಕುಲಕರ್ಣಿ ಮಾವನ ಅಂತ್ಯಕ್ರಿಯೆ ಮುಗಿಸಿ ಹಿಂಡಲಗಾ ಜೈಲಿಗೆ ಮರಳಿದ್ದಾರೆ.