ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರವಾಡ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರಿನ ಡೊಂಬರಕೊಪ್ಪ ಐಬಿಯಲ್ಲಿ ಕೆಡಿಪಿ ಸಭೆ ನಡೆಸಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಹಿನ್ನೆಲೆಯಲ್ಲಿ ಧಾರವಾಡದಿಂದ ಹೊರಗೆ ಸಭೆ ನಡೆಸಲಾಗಿದೆ. ಕ್ಷೇತ್ರದಿಂದ ಹೊರಗಿದ್ದುಕೊಂಡೇ ಚುನಾವಣೆಯಲ್ಲಿ ಗೆದ್ದಿರುವ ಶಾಸಕ ವಿನಯ ಕುಲಕರ್ಣಿ ತಾವು ಇರುವಲ್ಲಿಗೇ ಅಧಿಕಾರಿಗಳನ್ನು ಕರೆಸಿಕೊಂಡಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಜರಾಗಿದ್ದಾರೆ. ಸದ್ಯ ಕಿತ್ತೂರಿನಲ್ಲಿ ಧಾರವಾಡ ಶಾಸಕ ವಿನಯ ಕುಲಕರ್ಣಿ ಮನೆ ಮಾಡಿದ್ದಾರೆ.