
ನವದೆಹಲಿಯ ಜಂತರ್ ಮಂತರ್ ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಖ್ಯಾತನಾಮ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವಿನೇಶಾ ಫೋಗಟ್ ಈ ಆರೋಪ ಮಾಡಿದ್ದಾರೆ. ಆದರೆ ನನ್ನೊಂದಿಗೆ ಅಂತಹ ವರ್ತನೆ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರ ಪೈಕಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಲೈಂಗಿಕ ಕಿರುಕುಳಕ್ಕೊಳಗಾದ ಓರ್ವ ಕುಸ್ತಿಪಟು ಇದ್ದಾರೆ ಎಂದು ವಿನೇಶಾ ಫೋಗಟ್ ತಿಳಿಸಿದ್ದು, ಲಕ್ನೋದಲ್ಲಿ ನಡೆದ ರಾಷ್ಟ್ರೀಯ ತರಬೇತಿ ಶಿಬಿರದಲ್ಲೂ ಕೆಲವು ಕೋಚ್ ಗಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.