
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಇಂದು ಪ್ರಕಟವಾಗಲಿದೆ.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ಇಂದು ತೀರ್ಪು ಪ್ರಕಟಿಸಲಿದೆ. ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ ಥಾಮಸ್ ಬ್ಯಾಕ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿಯಮದನ್ವಯ ಒಂದೇ ವಿಭಾಗದಲ್ಲಿ ಎರಡು ಬೆಳ್ಳಿ ಪದಕ ನೀಡಲು ಸಾಧ್ಯವಿಲ್ಲ. ಆದರೂ, ಕ್ರೀಡಾ ಮತ್ತು ನ್ಯಾಯಾಲಯದ ತೀರ್ಪನ್ನು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಒಲಿಂಪಿಕ್ಸ್ ಫೈನಲ್ ನಿಂದ ವಿನೇಶ್ ಪೋಗಟ್ ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ರಾತ್ರಿ 9:30ಕ್ಕೆ ಸಿಎಎಸ್ ತೀರ್ಪು ಪ್ರಕಟಿಸಲಿದೆ. ಅನರ್ಹತೆ ಪ್ರಶ್ನಿಸಿ ಮತ್ತು ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ವಿನೇಶ್ ಪೋಗಟ್ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅರ್ಜಿಯ ಕುರಿತ ವಿಚಾರಣೆ ನಡೆಸಿದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಾದ ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿತ್ತು.