ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಆ. 16 ರಂದು ಪ್ರಕಟವಾಗಲಿದೆ.
ಅನರ್ಹತೆ ಪ್ರಶ್ನಿಸಿ ಮತ್ತು ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ವಿನೇಶ್ ಪೋಗಟ್ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅರ್ಜಿಯ ಕುರಿತ ವಿಚಾರಣೆ ನಡೆಸಿದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ವಾದ ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವುದಾಗಿ ಹೇಳಲಾಗಿತ್ತು, ಆದರೆ, ಆಗಸ್ಟ್ 16ರಂದು ತೀರ್ಪು ಪ್ರಕಟಿಸಲಿದೆ. ಇದರೊಂದಿಗೆ ಮೂರನೇ ಬಾರಿಗೆ ಪೋಗಟ್ ಪ್ರಕರಣ ತೀರ್ಪನ್ನು ಸಿಎಎಸ್ ಮುಂದೂಡಿದೆ.